2ನೆ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಧರಣಿ
ಬೆಂಗಳೂರು, ಮಾ.21: ವೇತನ ಏರಿಕೆ ಸೇರಿ ಇನ್ನಿತರ ಬೇಡಿಕೆಗಳಿಗೆ ಆಗ್ರಹಿಸಿ ಶೇಷಾದ್ರಿಪುರಂ ರಸ್ತೆಯ ಮೇಲ್ಸೇತುವೆ ಮುಂಭಾಗ ರಸ್ತೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಡೆಸುತ್ತಿರುವ ಧರಣಿ 2ನೆ ದಿನಕ್ಕೆ ಕಾಲಿಟ್ಟಿದೆ.
ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆ ವಿಫಲವಾದ ಕಾರಣ, ರಾಜಧಾನಿ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ರಾತ್ರಿ 8 ಗಂಟೆಯಿಂದ ರಸ್ತೆಯಲ್ಲಿಯೇ ಮಲಗಿ ಧರಣಿ ಆರಂಭಿಸಿದರು.
ಪ್ರತಿಭಟನಾ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು. ಪ್ರತಿಭಟನೆಯಿಂದಾಗಿ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತವಾಗಿದೆ.
Next Story