ಕಾರಿನಲ್ಲಿ ಬಂದು ಬೈಕ್ ಕದ್ದ!
ಬೆಂಗಳೂರು, ಮಾ.29: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ, ಮನೆ ಮುಂದೆ ನಿಲ್ಲಿಸಿದ್ದ ಬೈಕ್ನ್ನು ಕಳವು ಮಾಡಿರುವ ಘಟನೆ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಪುಟ್ಟೇನಹಳ್ಳಿಯ ಬೈಕ್ ಮಾಲಕ ಮಹೇಶ್ ಎಂಬುವರು ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ನ್ನು ಮಾ.26ರಂದು ಮುಂಜಾನೆ ವೇಳೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಸಿನೆಮಾ ಮಾದರಿಯಲ್ಲಿಯೇ ಕಳವು ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸುಮಾರು 70 ಸಾವಿರ ಮೌಲ್ಯದ ಬೈಕ್ನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಬೈಕ್ ಮಾಲಕ ಮಹೇಶ್ ದೂರು ನೀಡಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ಆರಂಭಿಸಿರುವ ಪೊಲೀಸರು, ವ್ಯಕ್ತಿ ಬಂದ ಕಾರಿನ ನೊಂದಣಿ ಸಂಖ್ಯೆ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Next Story