ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ವಿ.ಶ್ರೀನಿವಾಸ ಪ್ರಸಾದ್
ಬೆಂಗಳೂರು, ಮೇ 2: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನಿಯೋಜನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುವತ್ತ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬಲು, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕೆಂದು ಬಿಎಸ್ವೈ ತಮ್ಮ ಆದೇಶದಲ್ಲಿ ಪ್ರಸಾದ್ ಅವರಿಗೆ ಸೂಚಿಸಿದ್ದಾರೆ.
ನಂಜನಗೂಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲು ಕಂಡಿದ್ದ ಶ್ರೀನಿವಾಸ ಪ್ರಸಾದ್ ಅವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಯಡಿಯೂರಪ್ಪ ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಇಬ್ಬರು ಉಪಾಧ್ಯಕ್ಷರನ್ನು ಪದಚ್ಯುತಿಗೊಳಿಸಿದ್ದು, ಆ ಸ್ಥಾನಗಳಿಗೆ ನೂತನ ಉಪಾಧ್ಯಕ್ಷರನ್ನು ನಿಯೋಜಿಸಿದ್ದಾರೆ.
Next Story