ಭಯೋತ್ಪಾದನಾ ವಿರೋಧಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು, ಮೇ 20: ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಿಧಿ ಭೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರ ಪರಂಪರೆಯಲ್ಲಿ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲಾ ಶಕ್ತಿಯಿಂದ ಎದುರಿಸುತ್ತೇವೆ ಎಂದು ಪ್ರತಿಜ್ಞಾ ವಿಧಿ ಭೋದಿಸಿದರು.
ಇದೇ ಸಂದರ್ಭದಲ್ಲಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಸುಭಾಷ್ ಚಂದ್ರ, ಎಸಿಎಸ್. ಡಾ.ಮಂಜಳಾ, ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಡಾ.ರಮಣರೆಡ್ಡಿ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Next Story