ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ವಿಧೇಯಕ ಜಾರಿ: ರಮೇಶ್ಕುಮಾರ್
ಬೆಂಗಳೂರು, ಜೂ.19: ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಸರಕಾರ ವಿಧೇಯಕ ತರಲು ಮುಂದಾಗಿದ್ದು, ಇದರಿಂದ ಯಾವುದೆ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ಕುಮಾರ್ ಹೇಳಿದ್ದಾರೆ.
ಸೋಮವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಅದನ್ನು ವಿಧಾನ ಪರಿಷತ್ನಲ್ಲೂ ಮಂಡಿಸಿ ಸದನದ ಒಪ್ಪಿಗೆ ಪಡೆದು ವಿಧೇಯಕವನ್ನು ಜಾರಿ ಮಾಡಿಯೇ ತೀರುತ್ತೇವೆ. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ ಎಂದು ಹೇಳಿದರು.
Next Story