ನಾಡ ಪಿಸ್ತೂಲು ಮಾರಾಟ: ಬಂಧನ
ಬೆಂಗಳೂರು, ಜೂ.28: ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಾರತ್ಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಗೌತಮ್ ಪಾಂಡೆ(28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಮಾರತ್ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಡಪಿಸ್ತೂಲ್ನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಆರೋಪಿಯು ಬಿಹಾರದಿಂದ ರೈಲಿನ ಮೂಲಕ ನಾಡ ಪಿಸ್ತೂಲನ್ನು ನಗರಕ್ಕೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Next Story