ವೇಶ್ಯಾವಾಟಿಕೆ: ಇಬ್ಬರ ಬಂಧನ
ಬೆಂಗಳೂರು, ಜು.27: ಆನ್ಲೈನ್ನಲ್ಲಿ ಜಾಹೀರಾತು ಪ್ರಕಟಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಪದವೀಧರ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹೊಸಪಾಳ್ಯದ ಮೂರನೆ ಕ್ರಾಸ್ನ ಮಹೇಶ್ ಮತ್ತು ರವೀಶ್ ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.
ಬಂಧಿತರು ಲೊಕಾಂಟೋ ಡಾಟ್ ಕಾಂ ಸೇರಿ ವಿವಿಧ ವೆಬ್ಸೈಟ್ಗಳಲ್ಲಿ ಮಹಿಳೆಯರ ಫೋಟೊ ಮತ್ತು ಮೊಬೈಲ್ ನಂಬರ್ಗಳನ್ನು ಅಪ್ಲೋಡ್ ಮಾಡುತ್ತಿದ್ದರು. ಗ್ರಾಹಕರು ಕರೆ ಮಾಡಿದರೆ ಅವರನ್ನು ನಿಗದಿತ ಸ್ಥಳಕ್ಕೆ ಬರುವಂತೆ ಸೂಚಿಸಿ, ಅವರಿಂದ ಹೆಚ್ಚಿನ ಪ್ರಮಾಣದ ಹಣ ಪಡೆದು ಹೊರ ರಾಜ್ಯದಿಂದ ಮಹಿಳೆಯರನ್ನು ಕರೆಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.
Next Story