ಪೊಲೀಸರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ: 9 ಜನರ ಬಂಧನ
ಬೆಂಗಳೂರು, ಜು.27: ವಿಡಿಯೋ ಗೇಮ್ ಪಾರ್ಲರ್ವೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಒಂಭತ್ತು ಮಂದಿಯನ್ನು ಬಂಧಿಸಿರುವ ಪೊಲೀಸರು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಡಿದ್ದಾರೆ. ರೆಸಿಡೆನ್ಸಿ ರಸ್ತೆಯಲ್ಲಿರುವ ವಿಡಿಯೋ ಗೇಮ್ ಪಾರ್ಲರ್ವೊಂದರಲ್ಲಿ ಹಣ ಕಟ್ಟಿಕೊಂಡು ಜೂಜಾಟ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ವಿಡಿಯೊ ಗೇಮ್ ಪಾರ್ಲರ್ ಮೇಲೆ ದಾಳಿ ನಡೆಸಿದಾಗ ಪಾರ್ಲರ್ನಲ್ಲಿ ಜೂಜಾಟದಲ್ಲಿ ತೊಡಗಿದ್ದ ಓರ್ವ ವ್ಯಕ್ತಿ ಪೊಲೀಸರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದಾನೆ ಎನ್ನಲಾಗಿದೆ.
ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದಾಗ, ಪರಾರಿಯಾಗಲು ಯತ್ನಿಸಿದ ಒಂಭತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Next Story