ಸಿಎಂರನ್ನು ಭೇಟಿಯಾದ ಡಾ.ಅಹ್ಲೂವಾಲಿಯಾ
ಬೆಂಗಳೂರು, ಜು.28: ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಮಾಂಟೆಕ್ ಸಿಂಗ್ ಅಹ್ಲೂವಾಲಿಯಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿಯಾಗಿದ್ದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಅಹ್ಲೂವಾಲಿಯಾ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು. ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ನ ರೂಪುರೇಷೆಯನ್ನು ಅಹ್ಲೂವಾಲಿಯಾ ಅವರಿಗೆ ಸಿಎಂ ವಿವರಿಸಿದರು. ಜೊತೆಗೆ ಈ ವಿಷಯ ಕುರಿತು ಸಲಹೆ, ಸೂಚನೆ ನೀಡುವಂತೆ ಕೋರಿದರು.
ಈ ಸಂದರ್ಭ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ, ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ ಮತ್ತಿತರರು ಉಪಸ್ಥಿತರಿದ್ದರು.
Next Story