ಶಿವರಾಮಕಾರಂತ ಬಡಾವಣೆ ಡಿನೋಟಿಫೈ: ಬಿಎಸ್ವೈ ವಿರುದ್ಧ ಎಸಿಬಿಯಿಂದ ಎಫ್ಐಆರ್
ಬೆಂಗಳೂರು, ಆ.17: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಶಿವರಾಮಕಾರಂತ ಬಡಾವಣೆ ಡಿನೋಟಿಫೈ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ, ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಎಸಿಬಿ ಬಿಎಸ್ವೈ ವಿರುದ್ಧ ಡಿನೋಟಿಫಿಕೇಷನ್ ಆರೋಪದಡಿ ಎಫ್ಐಆರ್ ದಾಖಲಿಸಿದ್ದು, ಸದ್ಯದಲ್ಲಿಯೇ ತನಿಖೆ ನಡೆಸುವ ಸಾಧ್ಯತೆ ಇದೆ.
Next Story