ವೈದ್ಯಕೀಯ: ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು, ಆ.22: ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ-2017ನೆ ಸಾಲಿನ ಎರಡನೆ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
2017ನೆ ಸಾಲಿನಲ್ಲಿ ಸರಕಾರವು ನಿಗದಿಪಡಿಸಿರುವ ಸೀಟ್ ಮ್ಯಾಟ್ರಿಕ್ಸ್ ಅನ್ನು ಅಳವಡಿಸಿಕೊಂಡು, ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಆಪ್ಷನ್ ಅನ್ನು ಆಧರಿಸಿ ಸೀಟು ಹಂಚಿಕೆ ಮಾಡಲಾಗಿದೆ.
ಹಂಚಿಕೆಯಾದ ಸೀಟಿಗೆ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ, ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿ ನಿಗದಿತ ದಿನಾಂಕದೊಳಗೆ ಕಾಲೇಜಿಗೆ ಪ್ರವೇಶ ಪಡೆಯಬೇಕು. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ ಗೆ http://kea.kar.nic.in ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story