ವಿಧಾನಪರಿಷತ್ ಚುನಾವಣೆ: ‘ಕೈ’ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, ಆ.22: ವಿಧಾನಪರಿಷತ್ತಿಗೆ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅಂತಿಮಗೊಳಿಸಿ ಆದೇಶ ಹೊರಡಿಸಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರ- ಡಾ.ರಾಮೋಜಿ ಗೌಡರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಪ್ರಕಟಿಸಿದ್ದಾರೆ.
ಅಲ್ಲದೆ, ಇತರೆ ಹಿಂದುಳಿದ ವರ್ಗಗಳ ವಿಭಾಗ-ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ, ಆದಿವಾಸಿ ಕಾಂಗ್ರೆಸ್-ಕೆ.ಪಿ.ಪಾಲಯ್ಯ ಹಾಗೂ ಮೀನುಗಾರಿಕೆ ಕಾಂಗ್ರೆಸ್ ವಿಭಾಗದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಯು.ಕೆ.ಸಭಾಪತಿಯನ್ನು ನೇಮಕ ಮಾಡಲಾಗಿದೆ ಎಂದು ಜನಾರ್ದನ ದ್ವಿವೇದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story