ಮಾಜಿ ಸಿ.ಎಂ. ಕುಮಾರಸ್ವಾಮಿಗೆ ಯಶಸ್ವಿ ಟಿಶ್ಯೂ ವಾಲ್ವ್ ಶಸ್ತ್ರ ಚಿಕಿತ್ಸೆ
ಬೆಂಗಳೂರು, ಸೆ. 23: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಕಳೆದ ಕೆಲ ದಿನಗಳಿಂದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸತ್ಯಕಿ ನೇತೃತ್ವದ ತಂಡ 45 ನಿಮಿಷ ಕುಮಾರಸ್ವಾಮಿ ಅವರ ಹೃದಯಕ್ಕೆ ಅಳವಡಿಸಿದ್ದ ಟಿಶ್ಯೂ ವಾಲ್ವ್ ಬದಲಾಯಿಸುವ ಶಸ್ತ್ರಚಿಕಿತ್ಸೆ ನಡೆಸಿತು.
ಹತ್ತು ವರ್ಷದ ಹಿಂದ ಹೃದಯಕ್ಕೆ ಅಳವಡಿಸಿದ್ದ ಟಿಶ್ಯೂ ವಾಲ್ವ್ ಬದಲಾಯಿಸುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಸಧ್ಯ ವೈದ್ಯರ ನಿಗಾದಲ್ಲಿದ್ದಾರೆ. ಮಧ್ಯಾಹ್ನದ ವೇಳೆಗೆ ಸಹಜ ಸ್ಥಿತಿಗೆ ಮರಳಲಿದ್ದಾರೆಂದು ವೈದ್ಯರು ಮಾಹಿತಿ ನೀಡಿದ್ದಾರೆ.
Next Story