ಚಿತ್ರನಟ ರಾಜಶೇಖರ್ ಕೋಟ್ಯಾನ್ ಸಹಿತ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ
ಬೆಂಗಳೂರು, ಸೆ.27: ಚಲನಚಿತ್ರ ನಿರ್ಮಾಪಕ, ನಟ, ಹಾಗೂ ಬಿಲ್ಲವ ಮುಖಂಡ ರಾಜಶೇಖರ್ ಕೋಟ್ಯಾನ್ ಸಹಿತ ಹಲವು ಜೆಡಿಎಸ್ ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜಶೇಖರ್ ಕೋಟ್ಯಾನ್, ಚಿಕ್ಕಪೇಟೆಯ ಶಾಸಕ, ಜೆಡಿಎಸ್ ಮುಖಂಡ ಪಿ.ಎಸ್.ಪ್ರಕಾಶ, ಪಿ.ಎಸ್.ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಎನ್.ಪುಟ್ಟಸಿದ್ದಶೆಟ್ಟಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅವರನ್ನು ಪಕ್ಷದ ಬಾವುಟ ನೀಡಿ ಜಿ.ಪರಮೇಶ್ವರ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಕೆ.ಅಭಯಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
Next Story