ಕಂಕನಾಡಿ ರೈಲ್ವೆ ನಿಲ್ದಾಣ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ
ಮಂಗಳೂರು, ನ. 11: ಕಂಕನಾಡಿ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಅವರು 35-40 ವರ್ಷ ವಯಸ್ಸಿನವರು ಎಂದು ಅಂದಾಜಿಸಲಾಗಿದೆ.
ಅವರ ಮುಖಕ್ಕೆ ಕಲ್ಲಿನಿಂದ ಜಜ್ಜಲಾಗಿದ್ದು ಹಾಗು ತಲೆಯ ಹಿಂಭಾಗದಲ್ಲಿ ತೀವ್ರವಾರ ಗಾಯಗಳು ಪತ್ತೆಯಾಗಿದ್ದು, ಕೊಲೆ ಎಂದು ಪೊಲೀಸರು ಸಂಶಯ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story