ಡಿ.15: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶಾಖೆ ಉದ್ಘಾಟನೆ
ಮಂಗಳೂರು, ಡಿ.13: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜೋಕಟ್ಟೆ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಡಿ.15ರಂದು ಅಪರಾಹ್ನ 3:30ಕ್ಕೆ ಜೋಕಟ್ಟೆಯ ಸನ್ರೈಸ್ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ನ ಅಧ್ಯಕ್ಷ ಬಿ. ಇಬ್ರಾಹೀಂ ಅಧ್ಯಕ್ಷತೆ ವಹಿಸಲಿದ್ದಾರೆ.
ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಕರ್ನಾಟಕ ಸಹಕಾರ ಮಹಾಮಂಡಳಿಯ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್, ಸಹಕಾರ ಸಂಘಗಳ ಇಲಾಖೆಯ ಉಪನಿಬಂಧಕ ಬಿ.ಕೆ. ಸಲೀಂ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story