Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಕಡೆಂಗೋಡ್ಲು ಸ್ಮಾರಕ ಪ್ರಶಸ್ತಿ-2018'...

'ಕಡೆಂಗೋಡ್ಲು ಸ್ಮಾರಕ ಪ್ರಶಸ್ತಿ-2018' ಅಪ್ರಕಟಿತ ಕವನ ಸಂಕಲನಗಳ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Jan 2018 8:13 PM IST
share

ಉಡುಪಿ, ಜ. 4: 2018ನೇ ಸಾಲಿನ ಕಡೆಂಗೋಡ್ಲು ಸ್ಮಾರಕ ಪ್ರಶಸ್ತಿಗಾಗಿ ಅಪ್ರಕಟಿತ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ ಎಂದು ಎಂಜಿಎಂ ಕಾಲೇಜಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಂಯೋಜಕರು ಪ್ರಕಟಣೆಯಲಲಿ ತಿಳಿಸಿದ್ದಾರೆ.

ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 1978ರಲ್ಲಿ ಸ್ಥಾಪಿತವಾದ ಕಡೆಂಗೋಡ್ಲು ಸ್ಮಾರಕ ದತ್ತಿ ಸಮಿತಿಯು 10,000ರೂ.ಗಳ ವಾರ್ಷಿಕ ಬಹುಮಾನವನ್ನು ನೀಡುತ್ತಿದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ನೀಡಲಾಗುತ್ತದೆ. ಮೂವರು ವಿಮರ್ಶಕರಿರುವ ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ.

ಕಳೆದ ಐದು ವರ್ಷಗಳಲ್ಲಿ ಬರೆದ ಕನ್ನಡ ಕವಿತೆಗಳು, ಬಿಡಿಯಾಗಿ ಪತ್ರಿಕೆಗಳಲ್ಲಿ ಪೂರ್ವ ಪ್ರಕಟಿತವಾದುವು ಇರಬಹುದು, ಹೊಸದಾಗಿ ರಚಿತವಾದುವೂ ಇರಬಹುದು. ಒಂದು ಕವನ ಸಂಕಲನದಲ್ಲಿ ಕನಿಷ್ಠ 40 ಕವನಗಳು ಇರಬೇಕು. ಕವನಗಳು ಯಾವುದೇ ಕವನಸಂಕಲನದಲ್ಲಿ ಈ ಮೊದಲು ಪ್ರಕಟ ಗೊಂಡಿರಬಾರದು. ಸ್ಪರ್ಧೆಯಲ್ಲಿ ಭಾಗವಹಿಸುವವರ ಹೆಸರು ಮತ್ತು ವಿಳಾಸಳು ಪ್ರತ್ಯೇಕ ಹಾಳೆಯಲ್ಲಿರಬೇಕು.

ಲೇಖಕರು ತಮ್ಮ ಸಂಗ್ರಹದ ಒಂದು ನಕಲು ಪ್ರತಿಯನ್ನು (ಬೆರಳಚ್ಚು ಮಾಡಿದ) ಫೆ.28ರ ಒಳಗೆ ಸಮಿತಿಯ ವಿಳಾಸಕ್ಕೆ ಕಳುಹಿಸಬೇಕು. ಮೇ 1ಕ್ಕೆ ಸಮಿತಿಯು ತನ್ನ ನಿರ್ಣಯವನ್ನು ಘೋಷಿಸಲಿದೆ. ಬಹುಮಾನಕ್ಕಾಗಿ ಆಯ್ಕೆ ಯಾದ ಕವನ ಸಂಕಲನವನ್ನು ಡೆಮ್ಮಿ 1/8, 1/12 ಅಥವಾ 1/8 ಆಕಾರದಲ್ಲಿ ಮುದ್ರಿಸಬೇಕು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂಜಿಎಂ ಕಾಲೇಜು ಆವರಣ, ಉಡುಪಿ-576 102 (ದೂರವಾಣಿ:9480575783, ಕಚೇರಿ:0820-2521159) ಇವರನ್ನು ಸಂಪರ್ಕಿಸುವಂತೆ ಸಂಯೋಜಕರಾದ ಪ್ರೊ.ವರದೇಶ್ ಹಿರೇಗಂಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X