ಬಸ್ ಢಿಕ್ಕಿ: ಪಾದಚಾರಿ ಮೃತ್ಯು
ಬ್ರಹ್ಮಾವರ, ಜ.23: ಭದ್ರಗಿರಿ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.22ರಂದು ರಾತ್ರಿ 8ಗಂಟೆ ಸುಮಾರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಕಾಡಿ ನಿವಾಸಿ ಮಲ್ಲಪ್ಪಪೂಜಾರಿ ಎಂದು ಗುರುತಿಸಲಾಗಿದೆ. ಬ್ರಹ್ಮಾವರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ ರಸ್ತೆ ಬದಿ ನಿಂತಿದ್ದ ಮಲ್ಲಪ್ಪರಿಗೆ ಢಿಕ್ಕಿ ಹೊಡೆತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story