ಪಕ್ಷ ಸಂಘಟಿಸಿ, ಆದರೆ ಕರಾವಳಿಯ ಸೌಹಾರ್ದ ಕೆಡಿಸದಿರಿ
ಅಮಿತ್ ಶಾಗೆ ಖಾದರ್ ಮನವಿ
ಮಂಗಳೂರು, ಫೆ.9: ಕರಾವಳಿಯಲ್ಲಿ ಕಾಂಗ್ರೆಸ್ ಪ್ರಾಬಲ್ಯಕ್ಕೆ ಬೆದರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಲ್ಲೇ ಠಿಕಾಣಿ ಹೂಡಲು ನಿರ್ಧರಿಸಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬಿಜೆಪಿಗರು ಕಾಂಗ್ರೆಸ್ಸಿನ ಪ್ರಾಬಲ್ಯವನ್ನು ಅಂದಾಜಿಸುವಲ್ಲಿ ವಿಫಲವಾಗಿರುವ ಕಾರಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಸ್ವತಃ ಬರುತ್ತಿದ್ದಾರೆ ಎಂದು ನುಡಿದರು.
ಅಮಿತ್ ಶಾ ಅವರು ಕರಾವಳಿಯಲ್ಲಿ ಪಕ್ಷದ ಚಟುವಟಿಕೆ ಮಾಡಲಿ. ಅದಕ್ಕೆ ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಕೋಮು ಸೌಹಾರ್ದಕ್ಕೆೆ ಧಕ್ಕೆಯಾಗುವ ಯಾವುದೇ ಚಟುವಟಿಕೆಯನ್ನೂ ಇಲ್ಲಿ ಮಾಡಬೇಡಿ ಎಂದು ಅವರಲ್ಲಿ ಮನವಿ ಮಾಡುವುದಾಗಿ ಖಾದರ್ ಹೇಳಿದರು.
Next Story