ಬಿಐಟಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ಮಾ.22ರಂದು ಬೃಹತ್ ರಕ್ತದಾನ ಶಿಬಿರ
ಮಂಗಳೂರು,ಮಾ.17:ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಜಂಟಿ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮಾ.22ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಣಾಜೆಯ ಇನೋಳಿಯಲ್ಲಿರುವ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕಾಲೇಜ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ಪ್ರಮುಖರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಪ್ರಮುಖರು ರಕ್ತದಾನ ಮಹತ್ವದ ಬಗ್ಗೆ ಬಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story