ಪಕ್ಷ ಸಂಘಟನೆಯ ಬಗ್ಗೆ ಚರ್ಚೆ : ರಾಹುಲ್ ಸಭೆಯಲ್ಲಿ ಪಾಲ್ಗೊಂಡು ಸಚಿವ ಪ್ರಮೋದ್
ಮಂಗಳೂರು,ಮಾ.21:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಗಿದ್ದು, ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಎಂದು ಯುವಜನ ಮತ್ತು ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯುತ್ತಿರುವ ಬ್ಲಾಕ್ ಅಧ್ಯಕ್ಷರುಗಳ ಹಾಗು ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಚುನಾವಣೆಯನ್ನು ಹೇಗೆ ಎದುರಿಸಬೇಂಬುದರ ಬಗ್ಗೆ ಚರ್ಚಿಸಲಾಗಿದೆ ಎಂದರು.
ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರು ಹಾಗೂ ಪಕ್ಷಕ್ಕಾಗಿ ತ್ಯಾಗ ಮಾಡಿದವರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡುವುದಾಗಿ ಪ್ರಮೋದ್ ಹೇಳಿದರು.
Next Story