ಎರ್ಲಪಾಡಿ ಸಮೀಪ ಬಸ್ -ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು
ಕಾರ್ಕಳ, ಮೇ 14: ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಎರ್ಲಪಾಡಿ ಗ್ರಾಮದ ಶಾಂತಿ ಪಲ್ಕೆ ಕ್ರಾಸ್ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಜಾರ್ಕಳ ನಿವಾಸಿ ಸತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ಕೂಟರ್ನಲ್ಲಿ ಕಾರ್ಕಳ ಕಡೆಯಿಂದ ಜಾರ್ಕಳ ಕಡೆಗೆ ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸತೀಶ್ ಶೆಟ್ಟಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮದ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Next Story