ತೆಕ್ಕಟ್ಟೆ: ಟಯರ್ಗೆ ಬೆಂಕಿ ಹಚ್ಚಿ ಬಿಜೆಪಿ ಪ್ರತಿಭಟನೆ
ಕುಂದಾಪುರ, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀ ನಾಮೆ ನೀಡಿರುವ ಹಿನ್ನೆಲೆಯಲ್ಲಿ ತೆಕ್ಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟಯರ್ನ್ನು ತೆರವು ಗೊಳಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಕೂಡ ತೆಕ್ಕಟ್ಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
Next Story