ಪಾಕಿಸ್ತಾನ ಪರ ಘೋಷಣೆ ವೀಡಿಯೊ ವೈರಲ್: ಪರಿಶೀಲಿಸಿ ಕ್ರಮ; ಡಿಸಿಪಿ
ಮಂಗಳೂರು, ಮೇ 20: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾಜ್ಯದ ರಾಜಕೀಯ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರು ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ವಿವಿಧ ಕಡೆಗಳಲ್ಲಿ ರಾಜಕೀಯ ಪಕ್ಷ ವಿಜಯೋತ್ಸವಗಳನ್ನು ಆಚರಿಸಿತ್ತು. ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವ ವೀಡಿಯೊವೊಂದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.
Next Story