ದುರ್ಗಾ ಫ್ರೆಂಡ್ಸ್ ಕ್ಲಬ್: ದಡ್ಡಲಕಾಡು ಶಾಲೆಗೆ ಉಚಿತ ಬಸ್ ಹಸ್ತಾಂತರ
ಬಂಟ್ವಾಳ, ಜೂ. 8: ದಡ್ಡಲಕಾಡು ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಲ್ಲಿ ಏರಿಕೆಯಾಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದುರ್ಗಾ ಫ್ರೆಂಡ್ಸ್ ಕ್ಲಬ್ ಉಚಿತವಾಗಿ ನೀಡಿದ್ದ ಹೊಸ ಬಸ್ಅನ್ನು ಶುಕ್ರವಾರ ಶಾಲೆಗೆ ಹಸ್ತಾಂತರಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಶಾಲಾ ಬಸ್ನ ಕೀಲಿಕೈಯನ್ನು ಎಸ್ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯೋಪಾಧ್ಯಾರಿಗೆ ಹಸ್ತಾಂತರಿಸಿದರು.
ದುರ್ಗಾ ಫ್ರೆಂಡ್ಸ್ ಕ್ಲಬ್ ಪ್ರಕಾಶ್ ಅಂಚನ್, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್, ಜಿಪಂ ಸದಸ್ಯ ತುಂಗಪ್ಪ ಬಂಗೇರ, ಪಂಜಿಕಲ್ಲು ಗ್ರಾಪಂ ಅಧ್ಯಕ್ಷೆ ಸುಮಿತ್ರ ಯೋಗೀಶ್, ಕೆನರಾ ಬ್ಯಾಂಕಿನ ಮನೋಹರ್ ನಾಯಕ್, ಗ್ರಾಪಂ ಸದಸ್ಯರಾದ ಪೂವಪ್ಪ ಮೆಂಡನ್, ಕೇಶವ ಗೌಡ ದಡ್ಡಲಕಾಡು, ರೂಪಲೋಕನಾಥ, ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರಂಕಿ, ಕರುಣೇಂದ್ರ ಪೂಜಾರಿ, ದರ್ಣಪ್ಪ ಪೂಜಾರಿ, ದುರ್ಗಾ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ನವೀನ್ ಸೇಸಗುರಿ, ವಿನೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಸ್ವಾಗತಿಸಿ, ಪುರುಷೋತ್ತಮ ಅಂಚನ್ ವಂದಿಸಿದರು. ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಕ್ ಅವರನ್ನು ಸನ್ಮಾನಿಸಲಾಯಿತು.