ಹಿರಿಯಡಕ: ವಿಶ್ವ ಯೋಗ ದಿನಾಚರಣೆ
ಹಿರಿಯಡಕ, ಜೂ.21: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್,ರೇಂಜರ್ ಘಟಕ ಮತ್ತು ಎನ್ನೆಸ್ಸೆಸ್ ಘಟಕಗಳ ವತಿಯಿಂದ ವಿಶ್ವ ಯೋಗ ದಿನಾಚರಣೆ ಹಾಗೂ ಯೋಗ ಕಾರ್ಯಕ್ರಮವನ್ನು ಇಂದು ಕಾಲೇಜಿ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ವಹಿಸಿದ್ದರು. ಯೋಗಕ್ಕೆ ಜಾತಿ, ಧರ್ಮ,ಲಿಂಗದ ಸೋಂಕಿಲ್ಲ. ವೈಚಾರಿಕ, ವೈಜ್ಞಾನಿಕ ದೃಷ್ಟಿಕೋನದಿಂದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಅರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ರಾಘವೇಂದ್ರಪಿ.ಕೆ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ರೋವರ್ ಘಟಕದ ಸಂಚಾಲಕ ಅನಿಲ್ಕುಮಾರ್ ಕೆ. ಎಸ್., ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ, ರಾಜ್ಯಶಾಸ್ತ್ರ ವಿಬಾಗದ ಮುಖ್ಯಸ್ಥ ಸುಜಯಾ ಕೆ.ಎಸ್., ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story