ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾಪು, ಜೂ.26: ಕಾಪು ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಜೂ.25ರಂದು ಸಂಜೆ ವೇಳೆ ಬಸ್ಸೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಮಲ್ಲಪ್ಪ ಎಂದು ಗುರುತಿಸಲಾಗಿದೆ. ಹೊಸ ಮಾರಿಗುಡಿ ಕಡೆಯಿಂದ ಪೆಟ್ರೋಲ್ ಪಂಪ್ ಕಡೆಗೆ ಬರುತ್ತಿದ್ದ ಬೈಕ್ಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಮಲ್ಲಪ್ಪ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story