ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜು.11: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಕೋರ್ಸ್ ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತದೆ.
ಸಾಲ ಪಡೆಯಲಿಚ್ಚಿಸುವವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್ಸೈಟ್ www.karnataka.gov.in/dbcdc ನಲ್ಲಿ ಲಾಗಿನ್ ಆಗಿ ವೆಬ್ಸೈಟ್ನಲ್ಲಿ ಲ್ಯವಿರುವ- Username-infra-dbcdcarivu ಮತ್ತು Passward-DB(d#098 -ನ್ನು ನಮೂದಿಸಿ ಅರ್ಜಿಯನ್ನು ಆನ್ಲೈನ್ನಲ್ಲಿ ಭರ್ತಿಮಾಡಬೇಕು. ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸ್ಸೆಸೆಲ್ಸಿ ಅಂಕಪಟ್ಟಿ, ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಈ ದಾಖಲೆಗಳನ್ನು ಸ್ಕಾನ್ ಮಾಡಿ ಅರ್ಜಿಯೊಂದಿಗೆ ಆನ್ಲೈನ್ನಲ್ಲಿ ಜು.31ರೊಳಗೆ ಸಲ್ಲಿಸಬೇಕು. ಒಬ್ಬ ವಿದ್ಯಾರ್ಥಿ ಆನ್ಲೈನ್ನಲ್ಲಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದಲ್ಲಿ ಅವುಗಳನ್ನು ತಿರಸ್ಕರಿಸಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸ್ಗಳನ್ನು ಹೊರತುಪಡಿಸಿದ ಕೋರ್ಸ್ಗಳಿಗೆ 2018-19ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಸರಕಾರಿ/ಅನುದಾನಿತ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಜು.25ರೊಳಗೆ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಆ.4ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ‘ರಜತಾದ್ರಿ’, ಮಣಿಾಲ ಇಲ್ಲಿನ ಕಚೇರಿಗೆ ಸಲ್ಲಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಛೇರಿ, ದೂರವಾಣಿ ಸಂಖ್ಯೆ: 0820-2574882ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.