ಕಣಚೂರು: ವಿಜ್ಞಾನ ಸಂಘ ಉದ್ಘಾಟನೆ
ಕೊಣಾಜೆ,ಜು.21: ಕಣಚೂರು ಮಹಿಳಾ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ಉದ್ಘಾಟನೆಯು ನಡೆಯಿತು.ಮುಖ್ಯ ಅತಿಥಿಯಾಗಿ ಕಣಚೂರು ಮೆಡಿಕಲ್ ಸೈನ್ಸ್ನ ಫಾರೆನ್ಸಿಕ್ ಹಾಗೂ ಟಾಕ್ಸಿಕಾಲಜಿ ವಿಭಾಗದ ಡಾ. ಶಹನವಾಝ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿನಿಯರಿಗೆ ವಿಜ್ಞಾನಿಗಳ ಬಗ್ಗೆ ಮಾಹಿತಿ ಹಾಗೂ ವಿಜ್ಞಾನ ಸಂಘದ ಮಹತ್ವವನ್ನು ತಿಳಿಸಿಕೊಟ್ಟರು.
ವಿದ್ಯಾರ್ಥಿನಿಯರು ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿ, ಪರಿಸರ ಮಾಲಿನ್ಯ ಹಾಗೂ ದುಷ್ಪರಿಣಾಮಗಳ ಬಗ್ಗೆ ಕಿರುನಾಟಕದ ಮೂಲಕ ಜಾಗೃತಿ ಮೂಡಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ, ಡಾ.ಸತೀಸ್ ಮೋರೆ, ಡಾ. ಶಮೀಮಾ ಮತ್ತಿತ್ತರರು ಉಪಸ್ಥಿತರಿದ್ದರು.
ಉಪನ್ಯಾಸಕಿ ಮಿಶ್ರಿಯಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಫೀನಾ ಝೈನಾಬ ಸ್ವಾಗತಿಸಿದರು. ವಿದ್ಯಾರ್ಥಿನಿ ಹಲೀಮಾ ಶರೀಫಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿಜ್ಞಾನ ಸಂಘದ ಕಾರ್ಯದರ್ಶಿ ಶಹನಾ ವಂದಿಸಿದರು.
Next Story