ಶಿರಸಿ: ಬಸ್ - ಬೈಕ್ ಢಿಕ್ಕಿ; ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು
ಶಿರಸಿ, ಜು. 25: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಚಿಪ್ಗಿಯ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
Next Story