ಉಡುಪಿ : 11ಕ್ಕೆ ಬೃಹತ್ ರಕ್ತದಾನ ಶಿಬಿರ
ಉಡುಪಿ, ಸೆ.7: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಉಡುಪಿ ಜಿಲ್ಲಾ ಘಟಕ ಹಾಗೂ ರಕ್ತನಿಧಿ ಕೇಂದ್ರ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಸೆ.11ರಂದು ಬೆಳಗ್ಗೆ 10ಕ್ಕೆ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ.
ಶಿಬಿರವನ್ನು ಲಯನ್ಸ್ ಜಿಲ್ಲಾ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಜೀವನ್ದಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story