ಕಾರವಾರ : ಅಪರಿಚಿತ ವೃದ್ಧನ ಶವ ಪತ್ತೆ
ಕಾರವಾರ, ಸೆ. 23: ಕುಮಟಾ ಪಟ್ಟಣದ ವಾಯುವ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದ ಬಳಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ವಾಯುವ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆಯಾಗಿದೆ. ಮಧ್ಯ ರಾತ್ರಿಯಿಂದ ಅನಾಥ ವಾಗಿ ಬಿದ್ದುಕೊಂಡಿರುವ ಮೃತದೇಹ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ಅರಿತ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story