ಅಲ್ಇಹ್ಸಾನ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಶರೀಫ್, ಹುಸೈನ್, ಶಹೀಮ್
ಕಾಪು, ಅ.13: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅರೆಶಿರೂರು ಶ್ರೀಮೂಕಾಂಬಿಕಾ ಪ್ರೌಢಶಾಲೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ 14ರ ವಯೋಮಿತಿಯ ಕ್ರೀಡಾಕೂಟದಲ್ಲಿ ಮೂಳೂರು ಅಲ್ಇಹ್ಸಾನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮುಹಮ್ಮದ್ ಹುಸೈನ್ ಉದ್ದ ಜಿಗಿತದಲ್ಲಿ ಪ್ರಥಮ ಮತ್ತು ಮುಹಮ್ಮದ್ ಶಹೀಮ್ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕುಂಜಾಲು ವಿ.ಕೆ.ಆರ್.ಆಚಾರ್ಯ ಸ್ಮಾರಕ ಪ್ರೌಢಶಾಲೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರೌಢಶಾಲಾ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಮೂಳೂರು ಅಲ್ ಇಹ್ಸಾನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಶ್ಫಖುಲ್ಲಾ ಶರೀಫ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Next Story