ಮಂಗಳೂರು: ಶಾಸಕ ಭೋಜೇಗೌಡರ ಕಚೇರಿ ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿ
ಮಂಗಳೂರು, ಅ. 14: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಮಂಗಳೂರಿನಲ್ಲಿ ಆರಂಭಿಸಿ ರುವ ನೂತನ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು.
ನಗರದ ಕದ್ರಿ ಶಿವಭಾಗ್ ನಲ್ಲಿರುವ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಚೇರಿಯನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಐವನ್ ಡಿಸೋಜ, ಬಿ.ಎಂ. ಫಾರೂಖ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಅಯುಕ್ತ ಟಿ.ಆರ್. ಸುರೇಶ್, ಮೇಯರ್ ಭಾಸ್ಕರ್, ಮಾಜಿ ಶಾಸಕ ಮೊಯ್ದಿನ್ ಬಾವ, ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story