ಉಡುಪಿ: ಅ. 16ರಂದು ಭಾರೀ ಮಳೆಯ ಎಚ್ಚರಿಕೆ
ಉಡುಪಿ, ಅ.15: ಕರಾವಳಿ ಕರ್ನಾಟಕದ ಮೂರು ಜಿಲ್ಲೆಯಾದ್ಯಂತ ಅ.16ರಂದು ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಈ ಅವಧಿಯಲ್ಲಿ ಆರು ಸೆ.ಮಿ.ಗೂ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಅಲ್ಲದೇ ಅ.18 ಮತ್ತು 19ರಂದು ಸಹ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹೇಳಿದೆ.
Next Story