ಬಂಟ್ವಾಳ: ವಿಶ್ವ ಹೆಣ್ಣು ಮಗುವಿನ ದಿನಾಚರಣೆ
ಬಂಟ್ವಾಳ, ಅ. 16: ವಕೀಲರ ಸಂಘ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ವಿಶ್ವ ಹೆಣ್ಣು ಮಗುವಿನ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಮುಹಮ್ಮದ್ ಇಮ್ತಿಯಾಝ್ ಅಹ್ಮದ್ ಅವರು ಕಾರ್ಯಕ್ರವನ್ನು ಉದ್ಘಾಟಿಸಿದರು.
ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ರಮೇಶ್ ಉಪಾಧ್ಯಾಯ ಮತ್ತು ಪ್ರಸಾದ್ ಕುಮಾರ್ ರೈ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಲ್ಲಿಕಾ, ವಕೀಲವಿರೇಂದ್ರ ಎಂ. ಸಿದ್ದಕಟ್ಟೆ ಉಪಸ್ಥಿತರಿದ್ದರು.
Next Story