ತೋನ್ಸೆ ಪಂಚಾಯತ್ ನಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ
ಉಡುಪಿ, ಅ. 17: ತೋನ್ಸೆ ಪಂಚಾಯತ್ ನಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ ನಡೆಯಿತು.
ಗ್ರಾಮದ ವಿವಿಧ ಪ್ರದೇಶಗಳಲ್ಲಿ ಬೀದಿನಾಯಿಗಳಿಂದಾಗಿ ಊರ ನಾಗರಿಕರಿಗೆ ಆಗುತ್ತಿರುವ ಅನಾನುಕೂಲತೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆಲ ದಿನಗಳ ಹಿಂದೆ ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮವನ್ನು ಪಂಚಾಯತ್ ವತಿಯಿಂದ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಫೌಝಿಯ ಪರ್ವೀನ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನೇಜಾರ್ ಪಶುವೈದ್ಯರು ಮತ್ತು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Next Story