ನೋಟು ಅಮಾನ್ಯೀಕರಣಕ್ಕೆ 2 ವರ್ಷ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ
ಮಂಗಳೂರು, ನ.9: ಕೇಂದ್ರ ಸರಕಾರದ ನೋಟು ಅಮಾನ್ಯೀಕರಣಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಾಗೂ ವಿಜಯ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ಮೇಯರ್ ಕವಿತಾ ಸನಿಲ್, ಜಿಪಂ ಸದಸ್ಯೆ ಮಮತಾ ಗಟ್ಟಿ ಮೊದಲಾದವರು ಭಾಗವಹಿಸಿದ್ದರು.
Next Story