ಪುತ್ತೂರು: ದೇವಳದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ
ಪುತ್ತೂರು, ನ. 11: ಇಲ್ಲಿನ ಮಹತೋಭಾರ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ರವಿವಾರ ಪತ್ತೆಯಾಗಿದೆ.
ಮೃತದೇಹವನ್ನು ಪುತ್ತೂರು ಅಗ್ನಿ ಶಾಮಕ ದಳದ ಸಹಕಾರದಲ್ಲಿ ಕೆರೆಯಿಂದ ಮೇಲೆತ್ತಿ ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಎಸ್ಐ ಅಜಯ್ ಡಿ.ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story