ಅಕ್ರಮ ಗಾಂಜಾ ಮಾರಾಟ: ಓರ್ವನ ಸೆರೆ
ಉಡುಪಿ, ನ.14: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಪೆರಂಪಳ್ಳಿ ರೈಲ್ವೆ ಸೇತುವೆ ಬಳಿ ನ.14ರಂದು ಮಧ್ಯಾಹ್ನ 12ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಸೆಫ್ ನಗರದ ಪ್ರವೀಣ್ ಡಿಸೋಜ(34) ಬಂಧಿತ ಆರೋಪಿ. ಈತನಿಂದ 42ಸಾವಿರ ರೂ. ಮೌಲ್ಯದ 1 ಕೆ.ಜಿ. 214 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story