ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಆರೋಪಿ ಸೆರೆ
ಮಂಗಳೂರು, ನ.19: ನಗರದ ಮಠದಕಣಿ 1ನೇ ಕ್ರಾಸ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂಟಿಕಾನ ದಡ್ಡಲಕಾಡು ನಿವಾಸಿ ಮೇಘರಾಜ್ (26) ಬಂಧಿತ ಆರೋಪಿ.
ನಗರದ ಮಠದಕಣಿ 1ನೇ ಅಡ್ಡ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಆರೋಪಿಯಿಂದ 2 ಮೊಬೈಲ್ ಫೋನ್, ಲ್ಯಾಪ್ಟಾಪ್, 6,000 ರೂ. ನಗದು, 2 ಬೈಕ್, ಆಟೊರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 1,71,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story