Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ. ಪೀಟರ್ ಜೆ.ಕ್ಲಾಸ್ ಸಾಹಿತ್ಯದ ಬಗ್ಗೆ...

ಡಾ. ಪೀಟರ್ ಜೆ.ಕ್ಲಾಸ್ ಸಾಹಿತ್ಯದ ಬಗ್ಗೆ ವಿದೇಶಗಳಲ್ಲೂ ಆಸಕ್ತಿ ಮೂಡುವಂತೆ ಮಾಡಿದ ಸಂಶೋಧಕ -ಡಾ.ಬಿ.ಎ.ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ2 Jan 2019 11:00 PM IST
share

ಮಂಗಳೂರು, ಜ. 2: ಡಾ.ಪೀಟರ್ ಜೆ.ಕ್ಲಾಸ್ ತುಳು ನಾಡಿನ ಜಾನಪದ ಸಾಹಿತ್ಯದ ಬಗ್ಗೆ ವಿದೇಶದಲ್ಲೂ ಗಮನ ಸೆಳೆಯುವಂತೆ ಮಾಡಿದ ಮಹಾನ್ ವಿದ್ವಾಂಸ, ಸಂಶೋಧಕ ರಾಗಿದ್ದರು ಎಂದು ಅವರಿಗೆ ನುಡಿ ನಮನ ಸಲ್ಲಿಸಿದ ಡಾ.ಬಿ.ಎ.ವಿವೇಕ್ ರೈ ತಿಳಿಸಿದ್ದಾರೆ.

ನಗರದ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿ ಸಭಾಂಗಣದಲ್ಲಿ ಶುಕ್ರವಾರ ನಿಧನರಾದ ಡಾ.ಪೀಟರ್ ಜೆ ಕ್ಲಾಸ್ ಅವರಿಗೆ ನುಡಿ ನಮನ ಸಲ್ಲಿಸಿ ಅವರು ಇಂದು ಮಾತನಾಡುತ್ತಿದ್ದರು. ಅಮೇರಿಕಾದ ಕ್ಯಾಲಿಪೋರ್ನಿಯಾ ವಿಶ್ವ ವಿದ್ಯಾನಿಲಯದ ಮಾನವ ಶಾಸ್ತ್ರ ಮತ್ತು ಜಾನಪದ ವಿದ್ವಾಂಸ ಡಾ.ಪೀಟರ್ ಜೆ.ಕ್ಲಾಸ್ 1967 ರಲ್ಲಿ ಉಡುಪಿಗೆ ಬಂಧು ಕರಾವಳಿಯ ಬಗ್ಗೆ ಅಧ್ಯಯನ ನಡೆಸಲು ಆಸಕ್ತಿವಹಿಸಿದರು. ಕರಾವಳಿಯ ಬಂಟ ಜನಾಂಗದ ಬಂಧುತ್ವದ ಬಗ್ಗೆ ಅಧ್ಯಯನ ನಡೆಸುತ್ತಿದ್ದಾಗ ಸಿರಿ ಪಾಡ್ದನದ ಬಗ್ಗೆ ತಿಳಿದುಕೊಂಡು ಅವುಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯಡ್ಕದ ಕರ್ಗಿ ಮುಂಡಾಲ್ತಿ ಯಿಂದ ಸಿರಿ ಪಾಡ್ದನವನ್ನು ಕೇಳಿ ತಿಳಿದುಕೊಂಡು ಸಂಗ್ರಹಿಸಿದರು. ಅವುಗಳನ್ನು ಹೊರ ಜಗತ್ತಿಗೆ ತಿಳಿಯುವಂತೆ ಮಾಡಿದರು. ಜನಪದ ಅಧ್ಯಯನ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಡಾ.ಪೀಟರ್ ಜೆ.ಕ್ಲಾಸ್ ತಳ ಮಟ್ಟದ ಜನ ಸಾಮನ್ಯರೊಂದಿಗೆ ಸಾಮಾನ್ಯರಂತೆ ಬದುಕಿ ಅವರಿಂದ ಸಂಧಿ-ಪಾಡ್ದಾನಗಳನ್ನು ಸಂಗ್ರಹಿಸುತ್ತಿದ್ದರು.

ಅತ್ಯಂತ ಸರಳ ವ್ಯಕ್ತಿಯಾಗಿ ಬದುಕಿದ್ದ ಪೀಟರ್ ಜೆ. ಕ್ಲಾಸ್ ತುಳುನಾಡಿನ ಜನಪದ ಮೌಖಿಕ ಸಾಹಿತ್ಯದ ಬಗ್ಗೆ ಸಾಕಷ್ಟು ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ತುಳು ಭಾಷೆಯನ್ನು ಕಲಿತು ವ್ಯವಹರಿಸುತ್ತಿದ್ದರು. ಅದಕ್ಕೊಂದು ಉದಾಹರಣೆ ಅವರು ಬೆಳ್ಮದ ಬಳಿಯ ಒಂದು ಸಣ್ಣ ಗುಡಿಸಲಿನಲ್ಲಿದ್ದು ಅಲ್ಲಿನ ಜನರ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿದ್ದರು. ಬೈಕ್‌ನಲ್ಲಿ ಓಡಾಡುತ್ತಿದ್ದರು ಎಂದು ಡಾ.ಬಿ.ಎ.ವಿವೇಕ ರೈ ತಿಳಿಸಿದ್ದಾರೆ.

ಯುವ ಸಂಶೋಧಕರಿಗೆ ಮಾರ್ಗದರ್ಶಕರಾಗಿದ್ದರು:- ಡಾ.ಪೀಟರ್ ಜೆ ಕ್ಲಾಸ್ ಯುವ ಸಂಶೋಧಕರಿಗೆ ಮಾರ್ಗದರ್ಶಕರಾಗಿದ್ದರು. 1988ರಲ್ಲಿ ಜನಪದ ಸಾಹಿತ್ಯದ ಬಗ್ಗೆ ಕಾರ್ಯಗಾರವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಗಾರದಲ್ಲಿ ನಾನು ಮತ್ತು ಡಾ.ಪೀಟರ್ ಜೆ.ಕ್ಲಾಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದೆವು ಪರಿಣಾಮವಾಗಿ ಸಾಕಷ್ಟು ಸಂಶೋಧಕರಿಗೆ ಇದರಿಂದ ಮಾರ್ಗದರ್ಶನವಾಯಿತು.

ಕರಾವಳಿಯ ವೌಖಿಕ ಕಾವ್ಯಗಳಾದ ಸಂಧಿ-ಪಾಡ್ದನಗಳ ಬಗ್ಗೆ ವಿಶೇಷವಾಗಿ ಸಿರಿ ಪಾಡ್ದನದ ಬಗ್ಗೆ ಅಧ್ಯಯನ ನಡೆಸಿ ಅವುಗಳ ಬಗ್ಗೆ ಲೇಖನಗಳನ್ನು ಬರೆಯುವ ಮೂಲಕ ಸಂಶೋಧನೆಯ ಮೂಲಕ ಹೊರ ಜಗತ್ತಿಗೆ ತೆರೆದುಕೊಳ್ಳುವಂತೆ ಮಾಡಿದ್ದಾರೆ.ಕರಾವಳಿ ಜನಪದ ಕಥೆಗಳನ್ನು ಎ.ಕೆ.ರಾಮನುಜಂ ಜೊತೆ ಸೇರಿ ಆಂಗ್ಲ ಭಾಷೆಯ ಕೃತಿಯನ್ನು ಹೊರ ತಂದಿದ್ದಾರೆ. ನಾನು ಮತ್ತು ಅವ ರ ಜೊತೆ ಸೇರಿ ಕರ್ನಾಟಕ ಪೋಕ್ ಲೋರ್ ಎನ್ನುವ ವಾರ್ತಾಪತ್ರವನ್ನುಕೆಲವು ಕಾಲ ಹೊರತಂದಿ ದ್ದೇವೆ. ಪೀಟರ್ ಜೆ.ಕ್ಲಾಸ್ ತುಳುವಿನ ಸಂಧಿ,ಪಾಡ್ದನದಂತಹ ವೌಖಿಕ ಕಲೆಗಳ ಬಗ್ಗೆ ಅಧ್ಯಯನ ಮಾಡಿ ಕೃತಿ ರಚನೆ ಅಂತರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಲೇಖನಗಳನ್ನು ಬರೆದಿದ್ದಾರೆ. ಕರಾವಳಿಯ ಬಗ್ಗೆ ಅಧ್ಯಯನ ಮಾಡಿದ ಸಾಕಷ್ಟು ವರದಿಗಳು, ಸಂಗ್ರಹಗಳು, ಟಿಪ್ಪಣಿಗಳು ಅವರ ಬಳಿ ಇನ್ನೂ ಪ್ರಕಟವಾಗದೆ ಹಾಗೆ ಉಳಿದಿವೆ ಅವುಗಳನ್ನು ಪ್ರಕಟಿಸುವ ಬಗ್ಗೆ ಅಕಾಡೆಮಿಗಳು ಆಸಕ್ತಿವಹಿಸಿದರೆ ಉತ್ತಮ ಎನ್ನುವ ಸಲಹೆಯನ್ನು ಡಾ.ಬಿ.ಎ.ವಿವೇಕ ರೈ ತಿಳಿಸಿದರು.

ಪೀಟರ್ ಜೆ.ಕ್ಲಾಸ್ ಅವರ ಅಪ್ರಕಟಿತ ಕೃತಿಗಳನ್ನು ಹಾಗೂ ಅಧ್ಯಯನದ ದಾಖಲೆಗಳ ಸಂಗ್ರಹಗಳನ್ನು ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮುದ್ರಿಸಲು ಸಿದ್ಧವಿರುವುದಾಗಿ ಮತ್ತು ಈ ನಿಟ್ಟಿನಲ್ಲಿ ಎಲ್ಲಾ ಸಹಕಾರವನ್ನು ನೀಡುವುದಾಗಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದ್ದಾರೆ.

ಸಮಾರಂಭದ ವೇದಿಕೆಯಲ್ಲಿ ಡಾ.ವಾಮನ ನಂದಾವರ, ರಿಜಿಸ್ಟ್ರಾರ್ ಚಂದ್ರಹಾಸ ರೈ, ಬೆನೆಟ್ ಅಮ್ಮಣ್ಣ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X