ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
ಕೋಟ, ಜ.8: ಅಚ್ಲಾಡಿ ಗ್ರಾಮದ ಮಧುವನದ ಶ್ರೀನಿಧಿ ವೆಲ್ಡಿಂಗ್ ವರ್ಕ್ಸ್ ಎದುರು ಜ.7ರಂದು ಸಂಜೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೋಟ ಹೈಸ್ಕೂಲ್ ಕಡೆಯಿಂದ ಸಾಯಿಬ್ರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂಕಯ್ಯ ಶೆಟ್ಟಿ ಎಂಬವರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story