ಮೇಘಾಲಯ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
ಮಣಿಪಾಲ, ಜ.15: ಮೇಘಾಲಯ ಮೂಲದ ವಿದ್ಯಾರ್ಥಿಯೊಬ್ಬಳು ಮಣಿಪಾಲದ ಫ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಮಣಿಪಾಲದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ದಮಂಗ್ ಕಿರು ಪಸಿ (22) ಎಂದು ಗುರುತಿಸಲಾಗಿದೆ. ಇವರು ತನ್ನ ಸಹೋದರಿ ಜೊತೆ ಮಣಿಪಾಲದ ವಿ.ಪಿನಗರದಲ್ಲಿರುವ ಪೆವಿಲಿಯನ್ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ವಾಸವಾಗಿದ್ದರು.
ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಈಕೆ ಫ್ಲಾಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಬೆಳಗ್ಗೆ 7 ಗಂಟೆಗೆ ಬೆಳಕಿಗೆ ಬಂತೆನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story