ಕಲ್ಲಾಪು: ಕಾರು ಢಿಕ್ಕಿ- ಮಹಿಳೆ ಸಾವು
ಉಳ್ಳಾಲ, ಜ. 17: ಕಾರು ಢಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಕಲ್ಲಾಪು ಸಮೀಪ ಇಂದು ಬೆಳಗ್ಗೆ ನಡೆದಿದೆ.
ಉಳ್ಳಾಲ ಹೊಯ್ಗೆ ನಿವಾಸಿ ಡೋರತ್ ಪೌಲ್ ಎಂಬವರ ಪತ್ನಿ ಫ್ಲೋರಿನ್ ಡಿಸೋಜ (48) ಮೃತರು ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ವಾಚ್ ಕಂಪೆನಿಯಲ್ಲಿ ಉದ್ಯೋಗಿ ಆಗಿರುವ ಇವರು ಕೆಲಸಕ್ಕೆಂದು ತೆರಳುವ ಸಂದರ್ಭ ಘಟನೆ ಸಂಭವಿಸಿದೆ. ಕಲ್ಲಾಪು ಸಮೀಪ ಹೆದ್ದಾರಿ ದಾಟುವ ಸಂದರ್ಭ ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story