ಉಡುಪಿ: ಮೀನು ಮಾರಾಟ ಪರಿಕರಗಳ ವಿತರಣೆ
ಉಡುಪಿ, ಜ. 23: ಜಿಲ್ಲಾ ಪಂಚಾಯತ್ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮೀನುಗಾರಿಕಾ ಇಲಾಖೆಯಿಂದ ಜಿಲ್ಲೆಯ ಮೀನು ಮಾರಾಟಗಾರರಿಗೆ ಮೀನು ಮಾರಾಟ ಪರಿಕರಗಳನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಬುಧವಾರ ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story