ಗುರುಪುರಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರ
ಮಂಗಳೂರು, ಫೆ.11: ಯುನೈಟೆಡ್ ಫ್ರೆಂಡ್ಸ್ ಕ್ಲಬ್ ಗುರುಪುರ ಪೇಟೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಗುರುಪುರ ಪೇಟೆ ಸೊಸೈಟಿ ಮುಂಭಾಗದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರದಲ್ಲಿ ಸುಮಾರು 100 ಮಂದಿ ರಕ್ತದಾನ ಮಾಡಿದರು. ರಾಯಲ್ ಗಾಯ್ಸ ತಂಡದ ಅಧ್ಯಕ್ಷ ಫಾರೂಕ್ ಹಾಗೂ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.