ಆಡು ಕಳವು : ಆರೋಪಿ ಸೆರೆ
ಬಂಟ್ವಾಳ, ಫೆ. 15: ಮೇಯಲು ಬಿಟ್ಟಿದ್ದ ಆಡುಗಳನ್ನು ಕಳವು ಮಾಡಿದ ಆರೋಪದ ಮೇರೆಗೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ ರಿಝ್ವಾನ್ ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಇಬ್ರಾಹೀಂ ಎಂಬವರಿಗೆ ಸೇರಿದ ಆಡುಗಳಾಗಿದ್ದು, ನಾಲ್ಕು ಆಡುಗಳ ಒಟ್ಟು ಮೌಲ್ಯ 10 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story