ಉಪ್ಪಿನಂಗಡಿ: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ; ಚಾಲಕನಿಗೆ ಗಾಯ
ಉಪ್ಪಿನಂಗಡಿ, ಫೆ. 15: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ರಾತ್ರಿ ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪದ ಹಿರೇಬಂಡಾಡಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಲಾರಿ ಢಿಕ್ಕಿಯಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆ ಮೇಲೆ ಜೋತಾಡುತ್ತಿತ್ತು. ಇದರಿಂದ ಸುಮಾರು ಒಂದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲಿ ಘನ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಮೆಸ್ಕಾಂನವರು ಬಂದು ತಂತಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಲಾರಿ ಚಾಲಕ ಅಲ್ಪಸ್ವಲ್ಪ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story