ಪ್ರೋತ್ಸಾಹ ಧನ: ನೋಂದಾವಣೆ ಅವಧಿ ವಿಸ್ತರಣೆ
ಉಡುಪಿ, ಫೆ.16: 2018-19ನೆ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಪ್ರೊತ್ಸಾಹ ಧನಕ್ಕೆ ಆನ್ಲೈನ್ ಮೂಲಕ ನೊಂದಾವಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್ಸೈಟ್ www.sw.kar. nic.in ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ನೋಂದಾಯಿಸಲು ಕೊನೆಯ ದಿನ ಫೆ.15ನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ದೂ.ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story